ಗುರುವಾರ ತಡರಾತ್ರಿಯಿಂದಲೇ ತಂಡಗಳು ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು, ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ತಲಾಶ್ ನಡೆಸುತ್ತಿವೆ.
ಎಚ್.ಡಿ.ರೇವಣ್ಣ ಅವರ ಹೊಳೆನರಸೀಪುರ, ಪಡುವಲಹಿಪ್ಪೆ, ಬೆಂಗಳೂರು ನಿವಾಸಿಗಳು, ತೋಟದ ಮನೆಗಳು, ರೇವಣ್ಣ ಅವರ ಸಂಬಂಧಿಕರು, ಸ್ನೇಹಿತರ ಮನೆಗಳು, ತೋಟದ ಮನೆಗಳು ಸೇರಿದಂತೆ ಸುಮಾರು 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದು ,ಸದ್ಯಕ್ಕೆ ಎಲ್ಲಿಯೂ ಮಹಿಳೆಯ ಸುಳಿವು ಸಿಕ್ಕಿಲ್ಲ .
ಮೇ 2ರ ರಾತ್ರಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ಅಪಹರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು ,ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸತೀಶ್ ಬಾಬು ಎಂಬುವವರ ಮೇಲೆ ಅಪಹರಣದ ಆರೋಪ ಮಾಡಿದ್ದಾರೆ.
ಈ ಹಿಂದೆ ನಾಪತ್ತೆಯಾಗಿರುವ ಮಹಿಳೆ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವೂ ಕೇಳಿ ಬಂದಿದ್ದು ,ಪ್ರಕರಣವು ಮಹತ್ವ ಪಡೆದುಕೊಂಡಿದೆ.ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
ರಾತ್ರೋರಾತ್ರಿ ಸ್‌ಐಟಿ ಅಧಿಕಾರಿಗಳು ಮಹಿಳೆಯ ಪತ್ತೆಗಾಗಿ ಸುಮಾರು 25ಕ್ಕೂ ಅಧಿಕ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು