ರೇವಣ್ಣ ರಿಲೀಸ್ : ಬಿಗ್ ರಿಲೀಪ್

Team Newsnap
1 Min Read
  • ಐದು ದಿನಗಳ ಜೈಲು ವಾಸಕ್ಕೆ ಅಂತ್ಯ
  • ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿನ ಜಾಮೀನು

ಬೆಂಗಳೂರು : ಮಹಿಳೆಯೊಬ್ಬ ಅಪಹರಣ ಪ್ರಕರಣದ ಆರಫೊದಲ್ಲಿ ಜೈಲು ಹಕ್ಕಿಯಾಗಿದ್ ಮಾಜಿ ಸಚಿವ , ಶಾಸಕ ಹೆಚ್‌.ಡಿ. ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನೂ ಮಂಜೂರು ಮಾಡಿದೆ.

ಕಳೆದ ಐದು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಣ್ಣೀರು ಹಾಕುತ್ತಲೇ ದಿನ ನೂಕಿದ ರೇವಣ್ಣ ಅವರಿಗೆ ಕೊನೆಗೂ ರಿಲೀಫ್ ಸಿಕ್ಕಂತಾಗಿದೆ.

ಜಾಮೀನು ದೊರೆತರೂ ಇಂದೇ ಬಿಡುಗಡೆಯಾಗುವುದು ಅನುಮಾನ. ಜೈಲಿನ ಪ್ರಕ್ರಿಯೆಗಳು ಇಂದು ಪೂರ್ಣವಾಗುದಿಲ್ಲ. ಹೀಗಾಗಿ ನಾಳೆ ಜೈಲಿನಿಂದ ಬಿಡುಗಡೆಯಾಗುವ ಆಗುವ ಸಾಧ್ಯತೆಯಿದೆ.

ರೇವಣ್ಣನಿಗೆ ಷರತ್ತುಬದ್ಧ ಜಾಮೀನು :

ರೇವಣ್ಣನಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಧೀಶರು, 5 ಲಕ್ಷ ರೂ. ಬಾಂಡ್ ನೀಡಬೇಕು. ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ ಹಾಗೂ ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಆದೇಶಿಸಿದ್ದಾರೆ

ಪ್ರಕರಣದ ಸಂಬಂಧ ಇಂದು ಮಧ್ಯಾಹ್ನ ವಿಚಾರಣೆ‌‌ ಕೈಗೆತ್ತಿಕೊಳ್ಳುತ್ತಿದ್ದಂತೆ . ಎಸ್​​ಐಟಿ ಪರ ವಿಶೇಷ ಅಭಿಯೋಜಕರು ರೇವಣ್ಣ ಪರ ವಕೀಲರ ವಾದಕ್ಕೆ‌ ಪ್ರತಿವಾದ ಮುಂದುವರೆಸಿದರು. ಪ್ರತಿವಾದ ಮಂಡನೆ‌ ಪೂರ್ಣಗೊಂಡ ಬಳಿಕ ಅಂತಿಮವಾಗಿ ಸಾಧ್ಯವಾದರೆ 5 ಗಂಟೆ ವೇಳೆಗೆ ಜಾಮೀನು ಅರ್ಜಿ ಬಗ್ಗೆ ಆದೇಶ ನೀಡುವುದಾಗಿ ನ್ಯಾ‌ಯಮೂರ್ತಿ ಸಂತೋಷ್ ಗಜಾನನ್ ಭಟ್ ತಿಳಿಸಿದ್ದರು.ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಇದೀಗ ನ್ಯಾ‌ಯಮೂರ್ತಿಯವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದರು.

Share This Article
Leave a comment