ಬಂಧಿತನನ್ನು ಜಿ.ಎಸ್. ದಿನೇಶ್ ಎಂದು ಗುರುತಿಸಲಾಗಿದೆ. ಆಸ್ತಿಯ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಅರ್ಜಿದಾರನು ಒಂದು ವರ್ಷದಿಂದ ಸಂಬಂಧಿತ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಫೈಲ್ ಅನ್ನು ಸ್ಥಗಿತಗೊಳಿಸಿದ್ದರು.
ಕಾನೂನುಬದ್ಧವಾಗಿ ನಡೆಸಬೇಕಾದ ಸರ್ಕಾರಿ ಕಾರ್ಯಕ್ಕಾಗಿ ಲಂಚದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ, ಸಂತ್ರಸ್ತ ವ್ಯಕ್ತಿ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.
ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಬಳಿ, 4 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.ಇದನ್ನು ಓದಿ – ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ಕಂದಾಯ ನಿರೀಕ್ಷಕ ದಿನೇಶ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ದಾಳಿಯನ್ನು ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ನೇತೃತ್ವದಲ್ಲಿ ಕೈಗೊಳ್ಳಲಾಯಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು