December 24, 2024

Newsnap Kannada

The World at your finger tips!

vidansoudha

ವಿವಾದಿತ ಪಠ್ಯಗಳ ಪರಿಷ್ಕರಣೆ : ಕೈ ಬಿಟ್ಟ ಯಾವ ಅಂಶಗಳು ಸೇರ್ಪಡೆ : ವಿವರ ಹೀಗಿದೆ

Spread the love

ಪರಿಷ್ಕೃತ ಪಠ್ಯಪುಸ್ತಕ ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ ಸರ್ಕಾರ ವಿವಾದಿತ ಪಠ್ಯಗಳನ್ನು ಮಾರ್ಪಾಡು ಮಾಡಲು ಅಧಿಕೃತ ಆದೇಶ ಹೊರಡಿಸಿದೆ.

ಸ್ವಾಮೀಜಿಗಳು, ಸಂಘ ಸಂಸ್ಥೆಗಳ ವಿರೋಧ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ ಏನೇ ಪರಿಷ್ಕರಣೆ ಇದ್ದರೂ ಮಾರ್ಪಾಡು ಮಾಡುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ‌ ಮೇರೆಗೆ ವಿವಾದಿತ ಪಠ್ಯಗಳ ಮಾರ್ಪಾಡಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

7 ಪಠ್ಯಗಳ ಮಾರ್ಪಾಡಿಗೆ ಸರ್ಕಾರ ಆದೇಶ ಹೊರಡಿಸಿದೆ. ಅಂಬೇಡ್ಕರ್, ಕುವೆಂಪು, ಸುರಪುರದ ರಾಜರು, ಸಿದ್ದಗಂಗಾ ಶ್ರೀಗಳು ಸೇರಿದಂತೆ ವಿವಾದಕ್ಕೆ ಕಾರಣವಾಗಿದ್ದ, ಪಠ್ಯಗಳ ಮಾರ್ಪಾಡಿಗೆ ಆದೇಶ ಹೊರಡಿಸಲಾಗಿದೆ.‌
ಮಾರ್ಪಾಡು ಪಠ್ಯವನ್ನು ಪ್ರತ್ಯೇಕ ಪುಸ್ತಕ ಮುದ್ರಣ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಪಠ್ಯದಲ್ಲಿ ಸೇರ್ಪಡೆ ಏನೇನು ? :

  • 9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಅದರಲ್ಲಿ ಪರಿಷ್ಕೃತ ಪಠ್ಯದಲ್ಲಿ ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು “ಸಂವಿಧಾನದ ಶಿಲ್ಪಿ” ಎಂದು ಕರೆಯಲಾಗಿದೆ ಎಂಬ ವಾಕ್ಯವು ಇಲ್ಲವಾಗಿದ್ದು, ಸಂವಿಧಾನದ ಶಿಲ್ಪಿ” ಎಂಬುದರ ಪುನರ್ ಸೇರ್ಪಡೆ ಮಾಡಲಾಗುತ್ತದೆ.
  • 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2 ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ.
  • 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಸಂಪೂರ್ಣ ಪಾಠ ಸೇರ್ಪಡೆ.
  • 7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147 ರಲ್ಲಿ “ಗೊಂಬೆ ಕಲಿಸುವ ನೀತಿ” ಪದ್ಯದ ಕೃತಿಕಾರರ ಹೆಸರು ಡಾ. ಆರ್.ಎನ್. ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ಚಿ.ಉದಯಶಂಕರ್ ರವರ ಕವಿ ಪರಿಚಯ ಸೇರ್ಪಡೆ ಮಾಡಲಾಗುತ್ತದೆ.
  • 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಾಠ “ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ” ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಸೇರ್ಪಡೆ.
  • 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ “ಮೈಸೂರು ಮತ್ತು ಇತರ ಸಂಸ್ಥಾನಗಳು” ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳು ಸೇರ್ಪಡೆ
  • 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಪಠ್ಯಪುಸ್ತಕದಲ್ಲಿ “ಭಾರತದ ಮತ ಪರಿವರ್ತಕರು” ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ, 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ “ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು” ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ರವರ ಹಾಗೂ ಹುಯಿಲಗೋಳ ನಾರಾಯಣರಾವ್‌ ರವರ ಭಾವಚಿತ್ರಗಳನ್ನು ಆಳವಡಿಸುವುದು.

Copyright © All rights reserved Newsnap | Newsever by AF themes.
error: Content is protected !!