ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ

Team Newsnap
1 Min Read

ಬೆಂಗಳೂರು:

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಶನಿವಾರ ಸಲ್ಲಿಸಲಾಗಿದೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಸಿಎಂ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಉತ್ತರ ನೀಡುತ್ತಾ, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವಸಂಪುಟದಲ್ಲಿದ್ದಾರೆ, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.

Share This Article
Leave a comment