March 10, 2026

Newsnap Kannada

The World at your finger tips!

temperature

ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳ :ಹವಾಮಾನ ಇಲಾಖೆಯ ಮುನ್ಸೂಚನೆ

Spread the love

ಬೆಂಗಳೂರು: ಕರ್ನಾಟಕದಲ್ಲಿ ಚಳಿಗಾಲ ಮುಗಿದು, ಬೇಸಿಗೆಯ ಸೆಖೆ ಈಗಾಗಲೇ ಪ್ರಾರಂಭವಾಗಿದೆ. ಈ ವರ್ಷ ರಾಜ್ಯದಲ್ಲಿ ಮಳೆ ಮತ್ತು ಚಳಿ ತೀವ್ರವಾಗಿದ್ದರೂ, ಅದಕ್ಕೆ ತಕ್ಕಂತೆ ಬೇಸಿಗೆಯ ಉಷ್ಣತೆಯೂ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯಂತೆ, ಈ ಬಾರಿ ಬೆಂಗಳೂರಿನಲ್ಲಿ ತಾಪಮಾನ ದಾಖಲೆಯ ಮಟ್ಟ ತಲುಪುವ ಸಾಧ್ಯತೆ ಇದೆ.

ಫೆಬ್ರವರಿಯಿಂದಲೇ ತಾಪಮಾನ ಏರಿಕೆ
ಫೆಬ್ರವರಿಯಿಂದಲೇ ಹಗಲು ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಲಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಅತಿ ಬೇಸಿಗೆಯ ಎಚ್ಚರಿಕೆ!
ಸಿಲಿಕಾನ್ ಸಿಟಿ ಎಂದೇ ಪ್ರಸಿದ್ಧವಾದ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಮತ್ತು ಜನಸಂದಣಿಯ ನಡುವೆ ಈ ಬಾರಿಯ ಬೇಸಿಗೆ ತೀವ್ರವಾಗಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ನಗರದಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ವರೆಗೆ ಏರಬಹುದು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಪಮಾನ 36 ರಿಂದ 39 ಡಿಗ್ರಿ ಗಳ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ.ಇದನ್ನು ಓದಿ –MUDA ಹಗರಣ: ಮೇಲ್ಮನವಿ ಅರ್ಜಿ ಸಲ್ಲಿಕೆಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ!

ಒಣಹವೆ ಮುಂದುವರೆಯುವ ಸಾಧ್ಯತೆ
ಮುಂದಿನ 7 ದಿನಗಳವರೆಗೆ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದ್ದು, ತಂಪು ಪಾನೀಯಗಳ ಬೇಡಿಕೆ ಹೆಚ್ಚುವ ಲಕ್ಷಣಗಳು ಕಂಡುಬರುತ್ತಿವೆ. ಜನರು ಬೇಸಿಗೆಯಿಂದ ರಕ್ಷಣೆ ಪಡೆಯಲು ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕ.

error: Content is protected !!