July 6, 2022

Newsnap Kannada

The World at your finger tips!

road accident

ಮೂಡಿಗೆರೆ – ಗುಬ್ಬಿ ಬಳಿಎರಡು ಪ್ರತ್ಯೇಕ ರಸ್ತೆ ಅಪಘಾತ : ನಾಲ್ವರು ಸಾವು

Spread the love

ಕಳೆದ ರಾತ್ರಿ ನಂತರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ

ಗುಬ್ಬಿ ಬಳಿ ಸಾರಿಗೆ ಬಸ್ ಗೆ ಕಾರು ಢಿಕ್ಕಿ :

ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. ಗಿರೀಶ್ (37), ಮಾನ್ಯ (17) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಇದನ್ನು ಓದಿಮಂಡ್ಯ ಹೊರ ವಲಯದಲ್ಲಿ ಗೂಡ್ಸ್ ಟೆಂಪೋಗೆ ಬೆಂಕಿ – 10 ಲಕ್ಷ ರು ನಷ್ಟ

ಸೋಮವಾರ ಬೆಳ್ಳಂ ಬೆಳಗ್ಗೆ 5:30ರ ಸುಮಾರಿಗೆ ಈಅಪಘಾತ ಸಂಭವಿಸಿದೆ, ಘಟನೆ ವೇಳೆ ಬಸ್​​ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಗುಬ್ಬಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕಾರಿನಲ್ಲಿದ್ದ ರಾಕೇಶ್ (21) ಎಂಬಾತನ ಸ್ಥಿತಿ ಗಂಭೀರವಾಗಿದೆ ಕಾರಿನಲ್ಲಿದ್ದವರು ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದವರು.

ವಿದ್ಯಾರ್ಥಿನಿಯನ್ನು ಕಾಲೇಜಿಗೆ ದಾಖಲು ಮಾಡಲು ತುಮಕೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

road accident 1

ಮರಕ್ಕೆ ಕಾರು ಡಿಕ್ಕಿ – ತಂದೆ , ಮಗ ಸಾವು :

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ನಡೆದಿದೆ.

ನರಸಿಂಹರಾಜ್ (46), ಕಿರಣ್ (23)ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ರಾಜಾಜಿನಗರದ ಮೂಲದವರು. ಧರ್ಮಸ್ಥಳಕ್ಕೆ ತೆರಳಿ ವಾಪಸ್ ಹೋಗುವ ವೇಳೆ ಈ ಅವಘಡ ಸಂಭವಿಸಿದೆ. ಇನ್ನಿಬ್ಬರಿಗೆ ಗಂಭೀರ ಗಾಯಗೊಂಡಿದ್ದು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!