January 14, 2026

Newsnap Kannada

The World at your finger tips!

election , vote , police

Voting for state assembly tomorrow: 1.56 lakh police personnel in charge ನಾಳೆ ರಾಜ್ಯ ವಿಧಾನಸಭೆಗೆ ಮತದಾನ : 1.56 ಲಕ್ಷ ಪೊಲೀಸ್ ಸಿಬ್ಬಂದಿಗಳ ಉಸ್ತುವಾರಿ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು

Spread the love
ಇದನ್ನು ಓದಿ :ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ 

ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜರುಗಿದೆ, ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಮೃತರು.

ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರು ತ್ರಿಬಲ್ ರೈಡಿಂಗ್‌ನಲ್ಲಿ ಹೋಗುತ್ತಿದ್ದರು. ಆಗ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ನೋಡಿದ್ದಾರೆ. ಇದರಿಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ.

ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!