ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬಸ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಕಳೆದ ಮಧ್ಯರಾತ್ರಿ ಜರುಗಿದೆ.
ಮೈಲಾಪುರ ಗೇಟ್ ಬಳಿ ನಿಂತಿದ್ದ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಆಂಧ್ರಪ್ರದೇಶ ಮೂಲದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ 18 ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮಾಂತರ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ್ದರು.
More Stories
ಚುನಾವಣೆಯ ವೇಳೆ ಇಡಿ, ಸಿಬಿಐ ನಿಂದ ಡಿಕೆಶಿ, ಪುತ್ರಿ ಐಶ್ವರ್ಯಗೆ ಶಾಕ್
ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ