ಶಿರಾಳಕೊಪ್ಪದ ಬಳಿ ರಸ್ತೆ ಅಪಘಾತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

Team Newsnap
1 Min Read
Road accident near Shiralakoppa: 3 of the same family died ಶಿರಾಳಕೊಪ್ಪದ ಬಳಿ ರಸ್ತೆ ಅಪಘಾತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಜರುಗಿದೆ,

ಹಲುಗಿನಕೊಪ್ಪ ನಿವಾಸಿಗಳಾದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತ ದುರ್ದೈವಿಗಳು.ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಮೇಲೆ ರೇಪ್- ಮುರುಘಾ ಸ್ವಾಮೀಜಿ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ನವೆಂಬರ್6ರ ರಾತ್ರಿ ಹಲುಗಿನಕೊಪ್ಪ ನಿವಾಸಿ ಮಲ್ಲಿಕಾರ್ಜುನ್‌ ಎನ್ನುವವರು ಮಗಳು ಸೌಜನ್ಯ, ಪತ್ನಿ ಜ್ಯೋತಿ, ಅವರ ತಾಯಿ ಗಂಗಮ್ಮ ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಮಲ್ಲಿಕಾರ್ಜುನ್‌ ಹಾಗೂ ಕುಟುಂಬಸ್ಥರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು.

ಈ ವೇಳೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಬರುತ್ತಿದ್ದಂತೆ, ಹಿರೇಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ನಾಲ್ಕು ವರ್ಷದ ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ, ಜ್ಯೋತಿ ಹಾಗೂ ಗಂಗಮ್ಮ ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ರವಾನಿಸಲಾಗಿತ್ತು.


ಜ್ಯೋತಿ ಶಿಕಾರಿಪುರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ ಹಾಗೂ ಗಂಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಗಂಗಮ್ಮ ಚಿಕಿತ್ಸೆಗೆ ಸ್ಪಂದಿಸದೇ ಶಿವಮೊಗ್ಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಶಿರಾಳಕೊಪ್ಪ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಲ್ಲಿ ಮಲ್ಲಿಕಾರ್ಜುನ ಅವರ ಬೈಕ್‌ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಕಾರಿನ ಮುಂಭಾಗ ಕೂಡ ಜಖಂ ಆಗಿದೆ.

Share This Article
Leave a comment