December 27, 2024

Newsnap Kannada

The World at your finger tips!

police 1

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಾಮನಗರದ ಬಳಿ ದರೋಡೆ

Spread the love

ರಾಮನಗರ: ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಸುಲಿಗೆ ಮಾಡುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ನಡೆದಿದೆ.

ಚನ್ನಪಟ್ಟಣದಿಂದ ಬೆಂಗಳೂರಿಗೆ ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಹೋಗುತ್ತಿದ್ದರು.

ಕಾರು ಚಾಲಕ ನಿದ್ರೆ ಬಂದ ಕಾರಣ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರ್ ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಲಾಂಗ್ ತೋರಿಸಿ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿ ಆಗಿದ್ದಾರೆ.

9.13 ಲಕ್ಷ ರೂ. ಮೌಲ್ಯದ 166 ಗ್ರಾಂ ಚಿನ್ನಾಭರಣವನ್ನುದೋಚಿ ಪರಾರಿಯಾಗಿರುವ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು , ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಹಲವು ಕಡೆ ಪೊಲೀಸ್‌ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ಹೊಯ್ಸಳ ವಾಹನಗಳು ಗಸ್ತು ತಿರುಗುತ್ತವೆ. ಆದರೂ ದರೋಡೆ ಆಗುತ್ತಿರುವುದು ಬಂದಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!