ಸಾಂಸ್ಕ್ರತಿಕ ನಗರಿ ಮೈಸೂರಿನ ಒಳಚರಂಡಿ ಸ್ವಚ್ಚತೆಗೆ ರೊಬೋಟ್ ಯಂತ್ರ ಬಳಕೆಗೆ ನಿರ್ಧಾರ ಮಾಡಲಾಗಿದೆ.
ಇದು ಸ್ವಚ್ಛತಾ ವಾಹನ ಹೋಗದ ಕಡೆ, ಮ್ಯಾನ್ ಹೋಲ್‌ಗಳಲ್ಲಿ ಇಳಿದು ಮನುಷ್ಯರಂತೆ ಸ್ಚಚ್ಛತಾ ಕಾರ್ಯ ನಡೆಸಲಿದೆ ಎಂದು ನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗ್ಡೆ ತಿಳಿಸಿದ್ದಾರೆ.
ರಾಜ್ಯದಲ್ಲೇ ಮೊದಲ ಬಾರಿಗೆ ಮೈಸೂರು ಪಾಲಿಕೆ ಈ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಒಳಚರಂಡಿ ಸ್ವಚ್ಚತೆ ಗಾಗಿ ರೊಬೋಟ್ ಬಳಕೆ ಮಾಡಲು ಈಗಾಗಲೇ ರೋಬೊಟ್ ಖರೀದಿ ಕೂಡ ಮಾಡಲಾಗಿದೆ ಎಂದು ಹೇಳಿದರು.
ಒಳಚರಂಡಿ ಕಾರ್ಮಿಕರ ಸುರಕ್ಷತೆಯನ್ನು ಪ್ರಧಾನವಾಗಿ ಪರಿಗಣಿಸಲಾಗಿದೆ. ಕಾರ್ಮಿಕರು ಅನಾರೋಗ್ಯ, ಅವಘಡಗಳ ತಪ್ಪಿಸಲು ಇದು ಸಹಾಯಕಾರಿಯಾಗಿದೆ.
ಶೀಘ್ರದಲ್ಲೇ ನಗರದ ಒಳಚರಂಡಿ ಸ್ವಚ್ಚತೆಗೆ ರೊಬೋಟ್ ಬಳಕೆ ಮಾಡಲಾಗುವುದು. ನಗರಾಭಿವೃದ್ಧಿ ಸಚಿವರಿಂದ ಯಂತ್ರಕ್ಕೆ ಚಾಲನೆ ಸಿಗಲಿದೆ ಎಂದು ಆಯುಕ್ತರು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು