ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ಅವರು ಇಸ್ರೋ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಇಸ್ರೋ ಅಧ್ಯಕ್ಷ ಕೆ.ಶಿವನ್ ಅಧಿಕಾರಾವಧಿ ಅಂತ್ಯಗೊಂಡ ನಂತರ ಆ ಸ್ಥಾನಕ್ಕೆ ಇದೀಗ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ.
ಇಸ್ರೋ ಅಧ್ಯಕ್ಷರಾಗಿರುವುದರ ಜೊತೆಗೆ, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ.
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ 2018ರಿಂದಲೂ ಸೇವೆ ಸಲ್ಲಿಸುತ್ತಿರುವ ಸೋಮನಾಥ್, ಎಸ್ ಎಲ್ ಪಿ ಸೆಂಟರ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.
ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ಹಳೆಯ ವಿದ್ಯಾರ್ಥಿ ಸೋಮನಾಥ್, 1985ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋಗೆ ಸೇರಿದರು ಮತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮತ್ತು ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಯೋಜನೆಗಳಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ