February 20, 2026

Newsnap Kannada

The World at your finger tips!

sm

ಕೆರೆಗಳ ಒತ್ತುವರಿಯಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

Spread the love

ಮೈಸೂರು ನಗರ ಹಾಗೂ ಇತರ ಪ್ರದೇಶಗಳಲ್ಲಿರುವ ಕೆರೆಗಳನ್ನು ಯಾರೂ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೂಚಿಸಿದರು.

ಕೆರೆಗಳ ಸಂರಕ್ಷಣೆಯ ಸಂಬಂಧ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.

ಕೆರೆಗಳ ಬಫರ್ ಜೋನ್ ಹಾಗೂ ಗಡಿಯನ್ನು ಗುರುತಿಸಬೇಕು. ಅಗತ್ಯವಿದ್ದರೆ ಭೂ ದಾಖಲೆಗಳ ಉಪನಿರ್ದೇಶಕರಿಗೆ ತಿಳಿಸಿ, ಅಳತೆ ಕಾರ್ಯ ಮಾಡಿಸಿ ಕೆರೆಗಳ ಆಸ್ತಿಯನ್ನು ಉಳಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥಸ್ವಾಮಿ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಕಾವೇರಿ ನೀರಾವರಿ ನಿಗಮ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಮುಂತಾದ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!