ಬಾಲಿವುಡ್ ಹಾಸ್ಯ ನಟ ಮಹಮೂದ್ ಆಲಿ ಪುತ್ರ ಲಕ್ಕಿ ಆಲಿ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಟ್ವೀಟ್ ಮೂಲಕ ಸುಧೀರ್ ರೆಡ್ಡಿ ಹಾಗು ಮಧು ರೆಡ್ಡಿ ಎಂಬುವವರಿಂದ ಒತ್ತುವರಿ ಮಾಡಿಕೊಳ್ಳಲಾಗಿದೆ ಆರೋಪಿಸಿದ್ದಾರೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ವಿರುದ್ದ ಆರೋಪ ಕೇಳಿ ಬಂದಿದೆ.ಹಾಸ್ಯ ನಟ ಮನದೀಪ್ ರಾಯ್ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಪತಿಯಿಂದ ತನ್ನ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ, ಹಾಡುಗಾರರೊಬ್ಬರು ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.
ಯಲಹಂಕ ಬಳಿ ಇರುವ ಕೆಂಚೇನಹಳ್ಳಿ ಬಳಿಯ ಲಕ್ಕಿ ಆಲಿ ಅವರ ಪ್ರಾಪರ್ಟಿಯನ್ನು ತಮ್ಮ ಪತ್ನಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ಸಹಾಯದಿಂದ ಜಾಗ ಒತ್ತುವರಿಯಾಗಿದೆ ಎನ್ನಲಾಗುತ್ತಿದೆ. ಆದ್ರೆ ಲಕ್ಕಿ ಆಲಿ ಅವರ ದೂರಿಗೆ ಎಸಿಪಿಯವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ
ಗೃಹ ಸಚಿವರ ಏನಂತಾರೆ ?
ಈ ಆರೋಪದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿ, ಮಾಧ್ಯಮಗಳ ಮೂಲಕ ಈ ವಿಚಾರವನ್ನು ನಾನು ತಿಳಿದ್ದೇನೆ. ಯಾವ ಕಾರಣಕ್ಕೆ ಪೊಲೀಸ್ ದೂರು ಸ್ವೀಕರಿಸಲು ನಿರಾಕರಿಸಿದ್ದರು. ಯಾವ ಪೊಲೀಸ್ ಠಾಣೆ ಎಂಬ ಬಗ್ಗೆ ಮಾಹಿತಿ ತರಿಸಿಕೊಳ್ಳೊತ್ತೇನೆ. ಈ ಬಗ್ಗೆ ಡಿಜಿ ಜೊತೆ ನಾನು ಮಾತನಾಡುತ್ತೇನೆ ಎಂದರು.
ರೋಹಿಣಿ ಸಿಂಧೂರಿ ಹೇಳುವುದೇನು?
ಆರೋಪಗಳಿಗೆ ರೋಹಿಣಿ ಸಿಂಧೂರಿಯವರು ಪ್ರತಿಕ್ರಿಯಿಸಿ ಲಕ್ಕಿ ಅಲಿ ಆರೋಪದ ಬಗ್ಗೆ ನನ್ನ ಪತಿ ಸುಧೀರ್ ರೆಡ್ಡಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಭೂವ್ಯಾಜ್ಯಕ್ಕೆ ನನ್ನ ಪತಿ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ