ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕಾಲೋನಿಯ ಬಳಿ ನಡೆಯುವ ಮಾನ್ಯ ಪ್ರದಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ ಈ ಕೆಳಕಂಡಂತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮಳವಳ್ಳಿ ಕಡೆಯಿಂದ ಬರುವ ವಾಹನಗಳು ಕೆ.ಎಂ.ದೊಡ್ಡಿ-ಹುಣ್ಣನದೊಡ್ಡಿ, ಬೋರಾಪರ ಗೇಟ್ ಮಾರ್ಗವಾಗಿ ಮದ್ದೂರಿಗೆ 04 ಕಿಲೋ ಮೀಟರ್ ಹಿಂದಕ್ಕೆ ಎಡಗಡೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.
ಮದ್ದೂರು ಮತ್ತು ಸುತ್ತಮುತ್ತಲ ಕಡೆಯಿಂದ ತೆರಳುವ ವಾಹನಗಳು, ಮದ್ದೂರು- ಐ.ಬಿ.ವೃತ್ತ- ಮಳವಳ್ಳಿ ರಸ್ತೆಯಿಂದ ಸುಮಾರು 04 ಕಿ.ಮೀ ಮುಂದಕ್ಕೆ ಹೋಗಿ ಬಲಗಡೆಗೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.
ಗೆಜ್ಜಲಗೆರೆ ಸುತ್ತಮುತ್ತಲ ಗ್ರಾಮಗಳಿಂದ ತೆರಳುವವರು ಗೆಜ್ಜಲಗೆರೆ ಅಂಡರ್‍ಪಾಸ್‍ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು
ಮಂಡ್ಯ ಕಡೆಯಿಂದ ಬರುವ ವಾಹನಗಳು ಹನಕೆರೆ ಸರ್ವೀಸ್ ರೋಡ್‍ನಿಂದ ಗೆಜ್ಜಲಗೆರೆ ಗ್ರಾಮದ ಬಳಿಬಂದು ಗೆಜ್ಜಲಗೆರೆ ಅಂಡರ್‍ಪಾಸ್‍ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು