ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ನಿರ್ಧಾರದಿಂದ ನಿಗದಿಯಾದಂತೆ ನವೆಂಬರ್ 3ರಂದು ಆರ್ ಆರ್ ನಗರ ಉಪಚುನಾವಣೆ ನಡೆಯಲಿದೆ.
ಬಿಜೆಪಿಯ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪಿನ ನಂತರ ಉಪ ಚುನಾವಣೆ ನಡೆಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ.
2018ರ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಕಲಿ ಮತದಾರರ ಪಟ್ಟಿ ದೊರೆತ ಹಿನ್ನೆಲೆ, ಮಾಜಿ ಶಾಸಕ ಮುನಿರತ್ನ ವಿರುದ್ಧ ಚುನಾವಣಾ ಅಕ್ರಮ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರತಿಸ್ಪರ್ಧಿ ತುಳಸಿ ಮುನಿರಾಜುಗೌಡ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಸುಪ್ರಿಂಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ರಾಜರಾಜೇಶ್ವರಿನಗರದ ಟಿಕೆಟ್ ಆಕಾಂಕ್ಷಿಯಾಗಿರೋ ಮುನಿರತ್ನ ದಾರಿ ಸುಗಮವಾದಂತಾಗಿದೆ.
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ