ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ಬೈಕ್ ಗೆ ಮತ್ತೊಂದು ಗಾಡಿ ಟಚ್ ಆದ ಪರಿಣಾಮ, ಇಬ್ಬರು ಜಗಳದಲ್ಲಿ ನಿರತರಾಗಿದ್ದರು.ಇದನ್ನು ಓದಿ –ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ:ಪ್ರೊ ಸಿ ಎನ್ ಆರ್
ಈ ವೇಳೆ ಮಧ್ಯಪ್ರವೇಶಿಸಿ ಮಾಲೂರಿನ ಆರ್ ಎಸ್ ಎಸ್ ಮುಖಂಡ ರವಿ ಎಂಬುವರು, ಜಗಳ ಬಿಡಿಸೋದಕ್ಕೆ ಮುಂದಾಗಿದ್ದರು.
ಈ ವೇಳೆಯಲ್ಲಿ ರವಿ ಅವರಿಗೆ ಕ್ಷಲ್ಲಕ ಕಾರಣಕ್ಕಾಗಿ ಇಬ್ಬರು ವ್ಯಕ್ತಿಗಳಿಂದ ಚಾಕುವಿನಿಂದ ಇರಿಯಲಾಗಿದೆ. ಇದರಿಂದಾಗಿ ಆರ್ ಎಸ್ ಎಸ್ ಮುಖಂಡ ರವಿ ಅವರ ಮುಖಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಆರ್ ಎಸ್ ಎಸ್ ಕಾರ್ಯಕರ್ತರು, ಮಾಲೂರು ಬಸ್ ನಿಲ್ದಾಣದ ಎದುರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ಸಂಬಂಧ ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು