ವಿಧಾನಸಭೆ ನೂತನ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಆಯ್ಕೆ

Team Newsnap
1 Min Read
Rudrappa Lamani was elected as the new Vice President of the Legislative Assembly ವಿಧಾನಸಭೆ ನೂತನ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಆಯ್ಕೆ

ವಿಧಾನಸಭೆಯ ಉಪಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್‌ ಶಾಸಕ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು.

ನಿನ್ನೆ ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಹಾವೇರಿಯ ಶಾಸಕ ರುದ್ರಪ್ಪ ಲಮಾಣಿ ಅವರು ನಿನ್ನೆಯಷ್ಟೇ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು.ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಕೊನೆಘಳಿಗೆಯಲ್ಲಿ ಕೈ ತಪ್ಪಿತ್ತು. ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಈ ಹಿನ್ನೆಲೆಯಲ್ಲಿ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ತೀರ್ಮಾನಿಸಿತ್ತು. ಅದರಂತೆ ರುದ್ಪಪ್ಪ ಲಮಾಣಿ ಅವರು ವಿಧಾನಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Share This Article
Leave a comment