January 11, 2025

Newsnap Kannada

The World at your finger tips!

Defamation , Civil Court , order

Not to make a defamatory statement : Court ban for Rupa - Big relief for Rohini ಮಾನಹಾನಿ ಹೇಳಿಕೆ ನೀಡದಂತೆ ಡಿ. ರೂಪಾಗೆ ಕೋರ್ಟ್ ನಿರ್ಬಂಧ - ರೋಹಿಣಿಗೆ ಬಿಗ್ ರಿಲೀಫ್

ರೋಹಿಣಿ ಜೊತೆ ಜಟಾಪಟಿ , ವಾಗ್ದಾಳಿ ಮಾಡದಂತೆ ರೂಪಾಗೆ ನೀಡಿದ್ದ ತಡೆ ತೆರವು

Spread the love

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ ಮಾತನಾಡದಂತೆ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ.

ಕಳೆದ 2 ತಿಂಗಳ ಹಿಂದೆ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಗೆ ಸಂಬಂಧಿಸಿದಂತೆ ರೋಹಿಣಿ ವಿರುದ್ಧ ಮಾತನಾಡದಂತೆ ರೂಪಾಗೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು.

ಈ ಮಧ್ಯಂತರ ಆದೇಶವನ್ನು ರೂಪಾ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು, ಇದೀಗ ನ್ಯಾಯಾಲಯ ಪ್ರತಿಬಂಧಕಾಜ್ಞೆಯನ್ನು ತೆರವುಗೊಳಿಸಿದೆ.

ರೂಪಾಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ರೀತಿಯ ಮಾಧ್ಯಮಗಳಲ್ಲಿ ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ, ಬರಹಗಳನ್ನು ಪೋಸ್ಟ್ ಮಾಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿತ್ತು.

ಅಲ್ಲದೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ಸಲ್ಲಿಸಿದ್ದರು. ರೋಹಿಣಿ ವಿರುದ್ಧ ಇರುವ ಆರೋಪ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವೇಳೆ ರೂಪಾ ಅವರಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ರೋಹಿಣಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿತ್ತು.

Copyright © All rights reserved Newsnap | Newsever by AF themes.
error: Content is protected !!