ಮಂಡ್ಯ: ಮಂಗಳವಾರ ವಿಧಿವಶರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರು ತಾಲೂಕಿನ ಸೋಮನಹಳ್ಳಿಯ ಕೆಫೆ ಕಾಫಿ ಡೇ ಆವರಣಕ್ಕೆ ಕರೆತರಲಾಯಿತು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಪೊಲೀಸರು ಗೌರವದ ಕುಶಾಲತೋಪು ಸಿಡಿಸಿ, ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿದರು.
ಇಲ್ಲಿನ ಅಂತಿಮ ಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ಪ್ರಮುಖರು ಪಾಲ್ಗೊಂಡು ಶ್ರೀ ಕೃಷ್ಣ ಅವರ ಜೀವನ ಸೇವೆಗೆ ಶ್ರದ್ಧಾಂಜಲಿ ಅರ್ಪಿಸಿದರು.
ಈ ವೇಳೆ ಸಚಿವರಾದ ಜಿ. ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ, ಹೆಚ್.ಕೆ. ಪಾಟೀಲ್, ಕೆ. ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಅನೇಕ ಗಣ್ಯರು ಪಾರ್ಥಿವ ಶರೀರದ ಅಂತಿಮ ನಮನ ಸಲ್ಲಿಸಿದರು. ಮಾಜಿ ಸಂಸದೆ ಸುಮಲತಾ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ, ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇದನ್ನು ಓದಿ –ಪದವೀಧರರಿಗೆ ಸುವರ್ಣಾವಕಾಶ: ಸುಪ್ರೀಂಕೋರ್ಟ್‌ನಲ್ಲಿ 107 ಹುದ್ದೆಗಳ ನೇಮಕಾತಿ
ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದ ರಾಜ್ಯದಲ್ಲಿ ಶೋಕಾಚರಣೆ ಮಸುಕಾಗಿದೆ.
More Stories
ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ