December 19, 2024

Newsnap Kannada

The World at your finger tips!

s narayan

ನಿದೇ೯ಶಕ ಎಸ್​​. ನಾರಾಯಣ್ ಕಾಂಗ್ರೆಸ್ ಗೆ ಸೇರ್ಪಡೆ

Spread the love

ಕನ್ನಡದ ಹಿರಿಯ ನಿರ್ದೇಶಕ ಎಸ್​​. ನಾರಾಯಣ್ ಕಾಂಗ್ರೆಸ್​ ಪಕ್ಷವನ್ನು ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್​​ ಪಕ್ಷದ ಬಾವುಟ ಹಿಡಿದು ಪಕ್ಷ ಸೇರಿದ ಎಸ್​​. ನಾರಾಯಣ್​​ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು.

ಕಾಂಗ್ರೆಸ್​ ಸೇರ್ಪಡೆಯಾದ ಬಳಿಕ ಮಾತಾಡಿದ ಎಸ್​​. ನಾರಾಯಣ್​​​, ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುವ ಭರವಸೆ ನೀಡಿದ್ದಾರೆ 2023ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್​ ಕರ್ನಾಟಕ ಎಂದು ಘೋಷಣೆ ಕೂಗಿದರು.

ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. 2023 ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತರೋದೆ ನಮ್ಮ ಗುರಿ. ಇದಕ್ಕಾಗಿ ಹಗಲು ರಾತ್ರಿಯೆನ್ನದೇ ಶ್ರಮಿಸಲು ಸಿದ್ಧನಿದ್ದೇನೆ ಎಂದರು.

Copyright © All rights reserved Newsnap | Newsever by AF themes.
error: Content is protected !!