December 14, 2025

Newsnap Kannada

The World at your finger tips!

patel

ಭೂಸುಧಾರಣಾ ಕಾಯ್ದೆಯ ತಿದ್ದುಪಡಿ ಖಂಡಿಸಿದ ಎಸ್.ಆರ್. ಪಾಟೀಲ್

Spread the love

ನ್ಯೂಸ್ ಸ್ನ್ಯಾಪ್.
ಬೆಂಗಳೂರು.

ಸರ್ಕಾರವು ತಿದ್ದುಪಡಿ ಮಾಡಿರುವ ಭೂಸುಧಾರಣಾ ಕಾಯ್ದೆಯು ಅವೈಜ್ಞಾನಿಕವಾಗಿದೆ ಎಂದು ಮೇಲ್ಮನೆ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೇಳಿದರು.

ಬೆಂಗಳೂರಿನಲ್ಲಿ‌ ಭಾನುವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಪಾಟೀಲ್ ‘ಸರ್ಕಾರದ ಈ ನಿರ್ಧಾರ ರೈತರ ಪಾಲಿಗೆ ಸಹ್ಯವಲ್ಲ. ಈ ಕೂಡಲೇ ಸರ್ಕಾರ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಲಿದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.

error: Content is protected !!