ಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ನಿಗಧಿತ ಸಮಯದಂತೆ ಇಂದು 7.21ಕ್ಕೆ ಬ್ರಹ್ಮ ಕುಂಡಿಕೆಯಿಂದ ಕಾವೇರಿ ಜಲಧಾರೆ ತೀರ್ಥೋದ್ಬವಗೊಂಡಿತು.
ಸೋಮವಾರ ನಡೆದ ಕಾವೇರಿ ತೀರ್ಥೋದ್ಭವದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಭಾಗವಹಿಸಿ, ಪವಿತ್ರ ತೀರ್ಥೋದ್ಭವದಲ್ಲಿ ಮಿಂದೆದ್ದರು. ತೀರ್ಥೋದ್ಭವ ಸಂದರ್ಭ ಭಕ್ತರು ಹಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು , ಪೊಲೀಸರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ತಲಕಾವೇರಿ ಪವಿತ್ರ ಕುಂಡಿಕೆ ಬಳಿಯ ಕಲ್ಯಾಣಿಗೆ ಭಕ್ತರಿಂದ ನೂಕು ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಹಾಕಲಾಗಿತ್ತು. ತೀರ್ಥೋದ್ಭವ ವೀಕ್ಷಿಸಲು ಎಲ್‌ಇಡಿ ಪರದೆಯ ವ್ಯವಸ್ಥೆ ಕೂಡಾ ಮಾಡಲಾಗಿತ್ತು.ತಲಕಾವೇರಿಯ ತೀರ್ಥೋದ್ಭವದ ಈ ತುಲಾ ಸಂಕ್ರಮಣದ ಕಾಲದಲ್ಲಿ ತಲಾವೇರಿಗೆ ಬಂದು ಬ್ರಹ್ಮಕುಂಡಿಕೆಯ ಬಳಿಯಿರುವ ಕಲ್ಯಾಣಿಯಲ್ಲಿ ಮಿಂದು ಕಾವೇರಿ ತೀರ್ಥ ಸ್ವೀಕಾರ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತೆ ಎಂಬುದು ಜನರ ನಂಬಿಕೆಯಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು