ಸಾಹಿತಿ ‘ಬರಗೂರು ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

Team Newsnap
0 Min Read
Sahiti 'Baragur's health fluctuates: admitted to hospital ಸಾಹಿತಿ 'ಬರಗೂರು ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಹಿರಿಯ ಸಾಹಿತಿ ‘ಬರಗೂರು ರಾಮಚಂದ್ರಪ್ಪ’ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಧಿಡೀರ್ ಆಗಿ ಕುಸಿದು ಬಿದ್ದಿದ್ದಾರೆ.ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಇನ್ನಿಲ್ಲ

ರಕ್ತದೊತ್ತಡ ಹೆಚ್ಚಾದ ಹಿನ್ನೆಲೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Share This Article
Leave a comment