ಮಂಡ್ಯದ ಮದ್ದೂರು ಮೂಲದ ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್ ನಗರ ಠಾಣಾ ವ್ಯಾಪ್ತಿಯ ಪಟ್ಟಣಗೆರೆಯಲ್ಲಿ ಜರುಗಿದೆ.

ಇದನ್ನು ಓದಿ –ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ 1 ನೇ ಸ್ಥಾನ – ಇತರ ಪ್ರಮುಖ ವಿವರಗಳು
ಸತೀಶ್ ವಜ್ರ ಕೊಲೆಯಾದ ಯುವ ನಟ. ಮನೆಯಲ್ಲೇ ಚಾಕುವಿನಿಂದ ಸತೀಶ್ ಹತ್ಯೆ ಮಾಡಲಾಗಿದೆ.
ಸತೀಶ್ ಕನ್ನಡ ಲಗೋರಿ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಘಟನಾ ಸ್ಥಳಕ್ಕೆ ಆರ್.ಆರ್.ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಸತೀಶ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮೂರು ತಿಂಗಳ ಹಿಂದೆಯಷ್ಟೇ ಸತೀಶ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಸತೀಶ್ರನ್ನು ಕೊಲೆ ಮಾಡಲಾಗಿದೆ. ಪತ್ನಿ ಆತ್ಮಹತ್ಯೆಗೆ ಸತೀಶ್ ಕಾರಣ ಎಂದು ಭಾಮೈದುನನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ನಡೆಯುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು