ಇಡಿಯಿಂದ ಸ್ಯಾಂಡಲ್‌ವುಡ್‌ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ

Team Newsnap
1 Min Read

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 250 ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪ ಅಪ್ಪುಗೋಳ್ ಮೇಲಿದೆ.

ಇಡಿ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿತ್ತು.

ಗ್ರಾಹಕರಿಂದ ಠೇವಣಿಯಾಗಿ ಪಡೆದ ಕೋಟ್ಯಂತರ ರೂಪಾಯಿಯನ್ನು ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.

2020ರಲ್ಲಿ ಅಪ್ಪುಗೋಳ್‌ ಒಡೆತನದಲ್ಲಿದ್ದ 31.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆದಿರುವುದಾಗಿ ಇಡಿ ತಿಳಿಸಿತ್ತು.

ಅಪ್ಪುಗೋಳ್‌ ಹನುಮಾನ್‌ ನಗರದಲ್ಲಿನ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿನ ಜಾಗ, ತಾಲ್ಲೂಕಿನ ಬಿ.ಕೆ. ಬಾಳೇಕುಂದ್ರಿಯಲ್ಲಿನ ಮನೆ ಮತ್ತು ನೆಹರೂ ನಗರದಲ್ಲಿನ ಕಚೇರಿ ಹಾಗೂ ಅವರ ಹೆಸರಿನಲ್ಲಿನ ಬ್ಯಾಂಕ್ ಖಾತೆಗಳನ್ನು ಪಡೆದುಕೊಳ್ಳಲಾಗಿತ್ತು.

ಸಿಐಡಿ ಡಿವೈಎಸ್‌ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ ಬರೋಬ್ಬರಿ 2063 ಪುಟಗಳ ಚಾರ್ಜ್‌ಶೀಟ್‌ ಅನ್ನು ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 13 ಜನರು 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Share This Article
Leave a comment