November 27, 2022

Newsnap Kannada

The World at your finger tips!

apple box , sandalwood , actress

Sandalwood Queen Ramya produced the film 'Swati Muthina male Hani' ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದಲ್ಲಿ 'ಸ್ವಾತಿ ಮುತ್ತಿನ ಮಳೆ ಹನಿ' ಚಿತ್ರ ನಿರ್ಮಾಣ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿ’ ಚಿತ್ರ ನಿರ್ಮಾಣ

Spread the love

ಆಪಲ್ ಬಾಕ್ಸ್ ಪ್ರೊಡಕ್ಷನ್ಸ್ (Apple box production) ಎಂಬ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿ ಆ ಮೂಲಕ ಚಿತ್ರಗಳನ್ನು ನಿರ್ಮಿಸುವುದಾಗಿ ಹೇಳಿರುವ ನಟಿ ರಮ್ಯಾ( Actor Ramya) ವಿಜಯದಶಮಿಯ ದಿನ ತಾವೇ ನಟಿಸಿ ನಿರ್ಮಿಸುವ ‘ ಸ್ವಾತಿ ಮುತ್ತಿನ ಮಳೆ ಹನಿಯೇ’ ( Swathi Muttina Male Hani)ಹೆಸರಿನ ಈ ಚಿತ್ರವನ್ನು ಪ್ರಕಟಿಸಿದ್ದಾರೆ ರಾಜ್ ಬಿ ಶೆಟ್ಟಿ ( Raj B Shetty) ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ರಮ್ಯಾ( Ramya) ಮತ್ತು ರಾಜ್ ಬಿ ಶೆಟ್ಟಿ( Raj B Shetty) ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದನ್ನು ಓದಿ –ಉತ್ತರಖಂಡದಲ್ಲಿ ದುರಂತ – ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಕಂದಕಕ್ಕೆ ಬಿದ್ದು 25 ಮಂದಿ ಸಾವು

ರಾಜ್ ಹೇಳಿದ ಕಥೆಯಿಂದ ಖುಷಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ರಮ್ಯಾ ಹೇಳಿಕೊಂಡಿದ್ದಾರೆ. ಪ್ರೀ-ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ರಾಜ್ ಶೆಟ್ಟಿ ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರವೀಣ್ ಶ್ರೀಯಾನ್ ಮತ್ತು ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ಇಲ್ಲೂ ಮುಂದುವರೆಯಲಿದ್ದಾರೆ.

sandalwood,actress,good news

‘ಸ್ವಾತಿ ಮುತ್ತಿನ ಮಳೆ ಹನಿಯೇ’ ( Swathi Muttina Male Hani) ಚಿತ್ರವನ್ನು ರಮ್ಯಾ ಅವರ ಆಪಲ್ಬಾಕ್ಸ್ ಸ್ಟುಡಿಯೋಸ್( Apple Studios ) ಮತ್ತು ಲೈಟರ್ ಬುದ್ಧ ಫಿಲಂಸ್ ಜಂಟಿಯಾಗಿ ನಿರ್ಮಿಸುತ್ತಿವೆ.

error: Content is protected !!