ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್ . ಕೆ . ಭಗವಾನ್ ಇನ್ನಿಲ್ಲ

Team Newsnap
1 Min Read

ಕನ್ನಡದ ಹಿರಿಯ ನಿರ್ದೇಶಕ ದೊರೈ ಭಗವಾನ್ ಖ್ಯಾತಿಯ ಎಸ್ ಕೆ ಭಗವಾನ್ (90) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸಂಧ್ಯಾರಾಗ, ಕಸ್ತೂರಿನಿವಾಸ, ಜೇಡರ ಬಲೆ , ಜೀವನ ಚೈತ್ರ ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ದೊರೈ ಭಗವಾನ್ ಜೋಡಿ 24 ಕನ್ನಡ ಕಾದಂಬರಿಗಳ ಕಥಾ ವಸ್ತುಗಳನ್ನು ಬಳಕೆ ಮಾಡಿಕೊಂಡು ಚಲನ ಚಿತ್ರಗಳನ್ನು ನಿರ್ದೇಶಿಸಿದ್ದರು. ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ.

ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರ ಜುಲೈ 3 ರಂದು ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದರು.

ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು.

1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್, 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ.

Share This Article
Leave a comment