ಮೈಸೂರು ಭಾಗದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಮಾಜಿ ಸಚಿವ ಎಚ್. ವಿಶ್ವನಾಥ್ ಕಾಂಗ್ರೆಸ್ ಸೇರುವುದು ಖಚಿತವಾಗುವ ಬೆನ್ನಲ್ಲೇ ಈಗ ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಕೂಡ ಬಿಜೆಪಿ ತೊರೆಯುವುದಾಗಿ ಸೋಮವಾರ ಪ್ರಕಟಿಸಿದರು.
ಮೈಸೂರು ಭಾಗದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಲಿಎಂಬ ಸುದ್ದಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್, ನಾನು ಬಿಜೆಪಿಯಲ್ಲಿ ಸದ್ಯ ಸಕ್ರಿಯನಾಗಿಲ್ಲ. ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ನಾಯಕ ಪಟೇರಿಯಾ
ಅಕ್ರಮವಾಗಿದ್ದೇನೆ. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು ಎಂದರು.ಮೋಸ , ಅನ್ಯಾಯ ಮಾಡೋದರಲ್ಲಿ ಈ ಬಿಜೆಪಿಯವರು ನಿಸ್ಸೀಮರು ಎಂದು ಆರೋಪಗಳ ಸುರಿಮಳೆಗೈದರು.
ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ :
ಬಿಜೆಪಿಯ ಸಹವಾಸ ನನಗೆ ಸಾಕು. ಎಚ್.ವಿಶ್ವನಾಥ್ಗೂ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಸಿದ್ದರಾಮಯ್ಯರ ಜತೆ ಮಾತಾಡಿದ್ದೀನಿ. ಡಿ.ಕೆ. ಶಿವಕುಮಾರ್ರ ಜತೆಯೂ ಮಾತಾಡುವೆ ಎಂದು ಹೇಳಿದರು
ವಿಜಯೇಂದ್ರನನ್ನು ಬಲಿ ಕೊಡಲು ಕ್ಷೇತ್ರ ಸಿದ್ದತೆ :
ಬಿಜೆಪಿಯವರು ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದರು. ಆ ವೇಳೆಯೇ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ಈಗ ವಿಜಯೇಂದ್ರನನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟ್ಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದು ಎಂದು ಸಂದೇಶ್ ನಾಗರಾಜ್ ಗಂಭೀರ ಆರೋಪ ಮಾಡಿದರು.
ವಿಜಯೇಂದ್ರನನ್ನು ಬಲಿ ಕೊಡಲೆಂದೇ ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ. ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು