December 26, 2024

Newsnap Kannada

The World at your finger tips!

thasiladra

ಸಂಡೂರು ತಹಶೀಲ್ದಾರ್ ರಶ್ಮಿ ಗೆ ಯಾವುದೇ ಸ್ಥಾನ ತೋರಿಸದೇ ಎತ್ತಂಗಡಿ

Spread the love

ಕಾಂಗ್ರೆಸ್ ಶಾಸಕ ತುಕಾರಾಮ್ ಅವರಿಗೆ ಸಂಡೂರು ತಾಲೂಕಿನ ತಹಶೀಲ್ದಾರ್ ಹೆಚ್.ಜಿ. ರಶ್ಮಿ ಅವಮಾನ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ನಂತರ ಸರ್ಕಾರ ಯಾವುದೇ ಸ್ಥಾನ ತೋರಿಸದೆ ಎತ್ತಂಗಡಿ ಮಾಡಲಾಗಿದೆ

ಶಾಸಕರ ಅಸಮಾಧಾನಕ್ಕೆ ಕಾರಣ ಏನು? :

ಕಳೆದ ಆಗಸ್ಟ್ 15 ರಂದು ಧ್ವಜಾರೋಹಣಕ್ಕೆ ಶಾಸಕರು ಗೈರಾಗಿದ್ದರು. ಧ್ವಜಾರೋಹಣಕ್ಕೆ ಶಾಸಕರಿಗೆ ಮನೆಗೆ ಬಂದು ಆಹ್ವಾನ ನೀಡಿಲ್ಲ ಎನ್ನುವ ಕಾರಣಕ್ಕೆ ತುಕಾರಾಮ್ ಅಸಮಾಧಾನದಿಂದ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ತುಕಾರಾಮ್ ಅನುಪಸ್ಥಿತಿಯಲ್ಲಿ ರಶ್ಮಿ ಧ್ವಜಾರೋಹಣ ಮಾಡಿದ್ದರು.

ಈ ಹಿಂದೆ ಯಡಿಯೂರಪ್ಪ ಸಿಎಂ ಇರುವಾಗಲೇ ರಶ್ಮಿ ವರ್ಗಾವಣೆ ಮಾಡುವಂತೆ ತುಕಾರಾಮ್ ಪಟ್ಟು ಹಿಡಿದಿದ್ದರು. ಈ ಬಗ್ಗೆ ತುಕಾರಾಮ್ ಯಡಿಯೂರಪ್ಪಗೆ ಪತ್ರ ಕೂಡ ಬರೆದಿದ್ದರು. ಇದೀಗ ಈ ಪತ್ರ ವೈರಲ್ ಆಗುತ್ತಿದೆ.

ತುಕಾರಾಮ್ ಬೆಳಗಾವಿ ಅಧಿವೇಶನದಲ್ಲಿ ತಹಶೀಲ್ದಾರ್ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾಪ ಮಂಡನೆ ಮಾಡಿದರು. ತಹಶೀಲ್ದಾರ್ ಕಾಲೇಜಿನಲ್ಲಿ ಪಾರ್ಟಿ ಮಾಡುತ್ತಾರೆ. ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪ ಅವರ ಮೇಲಿದೆ. ಹಳ್ಳಿಗಳಲ್ಲಿ ತಹಶೀಲ್ದಾರರು ಕೋಲು ಹಿಡಿದು ಗೂಂಡಾ ವರ್ತನೆ ಮಾಡುತ್ತಿದ್ದಾರೆ. ವಾಲ್ಮೀಕಿ ಜಯಂತಿ ದಿನ ಕಾರ್ಯಕ್ರಮದಲ್ಲಿ ನನ್ನ ಹೆಸರು ಆಹ್ವಾನ ಪತ್ರದಲ್ಲಿ ಹಾಕಿಲ್ಲ. ಈ ಮೂಲಕ ಅವಮಾನ ಮಾಡಿದ್ದಾರೆ ಎಂದು ತುಕಾರಾಮ್ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿದ್ರು. ಅಲ್ಲದೆ ಕೆಲವು ಚಿತ್ರಗಳನ್ನು ಪ್ರದರ್ಶಿಸಿದರು.

ತಹಶೀಲ್ದಾರ್ ಎತ್ತಂಗಡಿ
ಕಾಂಗ್ರೆಸ್ ಶಾಸಕರ ಗದ್ದಲದ ಹಿನ್ನೆಲೆಯಲ್ಲಿ ಸದನವನ್ನು ಸ್ಪೀಕರ್ ಹತ್ತು ನಿಮಿಷಗಳ ಕಾಲ ಮುಂದೂಡಿ ಸಂಧಾನ ನಡೆಸಿದರು.

ಮತ್ತೆ ಪುನಃ ಸದನ ಸೇರಿದಾಗಲೂ ಕಾಂಗ್ರೆಸ್ ಸದಸ್ಯರು ಸದನದ ಬಾವಿಯಲ್ಲೇ ನಿಂತು ಪ್ರತಿಭಟನೆ ಮುಂದುವರೆಸಿದರು.

ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಈಗಾಗಲೇ ಕರೆದ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ತಕ್ಷಣದಿಂದ ಜಾರಿಗೆ ಬರುವಂತೆ ತಹಶೀಲ್ದಾರ್ ರಿಲೀವ್ ಮಾಡಿದ್ದೇವೆ. ಅವರಿಗೆ ಯಾವುದೇ ಸ್ಥಾನ ತೋರಿಸಲ್ಲ. ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುತ್ತೇವೆ ಎಂದರು. ಬಳಿಕ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ವಾಪಸ್ ತೆಗೆದುಕೊಂಡರು.

Copyright © All rights reserved Newsnap | Newsever by AF themes.
error: Content is protected !!