ಲಂಚ ಪಡೆದ ಆರೋಪದ ಹಿನ್ನಲೆಯಲ್ಲಿ ACB ವಿಚಾರಣೆಯ ಬೆನ್ನಲ್ಲೇ ಬೆಂಗಳೂರು ನಗರ ಡಿ.ಸಿ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ, ಸಂಗಪ್ಪ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಸಿ ಮಂಜುನಾಥ್ ಅವರನ್ನ ಎಸಿಬಿ ಅಧಿಕಾರಿಗಳು ನಿನ್ನೆ ವಿಚಾರಣೆ ನಡೆಸಿದ್ದರು. ಬರೋಬ್ಬರಿ ಹತ್ತು ಗಂಟೆಗೂ ಅಧಿಕ ಕಾಲ ವಿಚಾರಣೆಯನ್ನು ಎದುರಿಸಿದ್ದರು.
ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪದಡಿ ವಿಚಾರಣೆ ನಡೆಸಲಾಗಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಆರೋಪ ಬೆನ್ನಲ್ಲೇ ಅವರನ್ನು ಬಂಧಿಸುವಂತೆ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತ್ತು.
ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಮ್ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಿದೆ.
ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಸಂಗಪ್ಪ ಈಗ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು