December 22, 2024

Newsnap Kannada

The World at your finger tips!

WhatsApp Image 2024 11 11 at 9.42.37 AM

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ ಖನ್ನಾ ಪ್ರಮಾಣ ವಚನ ಸ್ವೀಕಾರ

Spread the love

ನವದೆಹಲಿ: ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ ಖನ್ನಾ ಅವರು ಇಂದು (ನ.11) ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ. ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಶನಿವಾರ ನಿವೃತ್ತರಾಗಿದ್ದು, ನ್ಯಾ. ಸಂಜೀವ ಖನ್ನಾ ಅವರ ಶಿಫಾರಸಿನ ಮೇರೆಗೆ ಅ. 24ರಂದು ಹೊಸ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ನ್ಯಾ. ಖನ್ನಾ ಅವರು 2025ರ ಮೇ. 31ರವರೆಗೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

2019ರ ಜನವರಿಯಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಪದವಿಯನ್ನು ಹೊಂದಿದ ನ್ಯಾ. ಖನ್ನಾ ಅವರು ಹಲವು ಪ್ರಮುಖ ತೀರ್ಪುಗಳನ್ನು ನೀಡಿದರು. ಚುನಾವಣಾ ಬಾಂಡ್ ಯೋಜನೆ ರದ್ದುಪಡಿಸುವ ವಿಚಾರ ಮತ್ತು ಭಾರತದ ಸಂವಿಧಾನದ 370ನೇ ವಿಧಿಯ ರದ್ದತಿಯನ್ನು ಸಮರ್ಥಿಸಿದ ಸಂವಿಧಾನ ಪೀಠದ ಭಾಗವಾಗಿದ್ದರು.

ಇದನ್ನು ಓದಿ – ಮಂಗಳೂರಿನಲ್ಲಿ ಬಾಲಕಿಗೆ ಸಾಮೂಹಿಕ ಅತ್ಯಾಚಾರ – ಮೂವರಿಗೆ ಜೀವಾವಧಿ ಶಿಕ್ಷೆ

ಇದೇ ರೀತಿಯಲ್ಲಿ, ಜುಲೈನಲ್ಲಿ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆ ಸಮಯದ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದ ತೀರ್ಪು ಅವರ ನೇತೃತ್ವದ ಪೀಠದಿಂದ ಹೊರಬಂದಿತ್ತು.

Copyright © All rights reserved Newsnap | Newsever by AF themes.
error: Content is protected !!