ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ

Team Newsnap
1 Min Read

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ನ್ಯಾಯಾಲಯ ಆದೇಶಿಸಿದೆ.2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್‌ ಶಾ

ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 31ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್‍ಗೆ ಸಲ್ಲಿಸಿ ಎಂದು ಸೂಚಿಸಿದೆ.

ಕೆಲವೊಂದು ಸಾಕ್ಷ್ಯಗಳಲ್ಲಿ ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎಗೆ ಹಣ ನೀಡಿರುವುದು ವಾಟ್ಸಪ್ ಚಾಟ್‍ನಲ್ಲಿ ಬಹಿರಂಗವಾಗಿದೆ. ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎ ಜೊತೆ ನಡೆಸಿರುವ ವಾಟ್ಸಪ್ ಚಾಟ್ ಲಭ್ಯವಾಗಿದೆ. ಈ ಮೂಲಕ ಈಶ್ವರಪ್ಪಗೆ ಸಂತೋಷ್ ಆತ್ಮಹತ್ಯೆ ಪ್ರಕರಣ ಇನ್ನೂ ಸಂಕಷ್ಟ ತಂದಿಟ್ಟಿದೆ.

Share This Article
Leave a comment