ನಿಮಿಷಾಂಭ ದೇವಿಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ಬಂಧನ : ಅಲೋಕ್ ಕುಮಾರ್

Team Newsnap
1 Min Read
Santro arrested within 22 hours of prayer to Nimishamba God : Alok Kumar ನಿಮಿಷಾಂಭ ದೇವಿಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ಬಂಧನ : ಅಲೋಕ್ ಕುಮಾರ್

ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನ ನಿಮಿಷಾಂಭ ದೇವಿ ಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಶನಿವಾರ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್ ಅವರು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು.

ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು ಎಂದು ವಿವರಿಸಿದರು.
ನಾನು ಜನವರಿ 10ರಂದು ನಾನು ಇಲ್ಲಿಗೆ ಬಂದು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ.

ಈ ಬಾರಿಯೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.ಸೋಮವಾರದಿಂದ ‘ಬೆಂಗಳೂರು-ಮೈಸೂರಿ’ಗೆ ‘ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್’ ಸಂಚಾರ ಆರಂಭ

ದೇವಿ ಮೇಲೆ ಅಪಾರವಾದ ನಂಬಿಕೆ ಇದೆ. ನಾನಗೂ ಬಹಳ ನಂಬಿಕೆ ಇದೆ. ಆತನಿಂದಾಗಿ ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಆತ ಈಗ ನಮ್ಮ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.

Share This Article
Leave a comment