November 8, 2025

Newsnap Kannada

The World at your finger tips!

Crime , criminal , suicide

Santro Ravi suicide attempt? Fluctuations in health - admitted to hospital ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ? ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ? ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

Spread the love

ಕ್ರಿಮಿನಲ್ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದೆ ಈಗ ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ.

ಮಧುಮೇಹ ಬಳಲುತ್ತಿದ್ದ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಗುರುವಾರ ಸಂಜೆ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಶುಗರ್ 400 ಕ್ಕೂ ಅಧಿಕವಾಗಿತ್ತು. ಈ ಹಿನ್ನೆಲೆ ವಿಕ್ಟೋರಿಯಾಗೆ ದಾಖಲಿಸಲಾಗಿದೆ.ಬಹುಭಾಷಾ ಹಿರಿಯ ನಟಿ ‘ಜಮುನಾ’ ನಿಧನ

ಸದ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ನಿಯಮಿತ ಮಾತ್ರೆಗಳಿಗಿಂತ ಹೆಚ್ಚಿನ ಮಾತ್ರೆಗಳನ್ನು ಸೇವಿಸಿದ ಅನುಮಾನ ಬಂದಿದೆ. ಸದ್ಯಕ್ಕೆ ವೈದ್ಯರ ಬಳಿ ಅಧಿಕಾರಿಗಳು ಮಾಹಿತಿ ತಿಳಿದುಕೊಳ್ಳುತ್ತಿದ್ದಾರೆ.

ಶುಗರ್, ಬಿಪಿ ಸೇರಿ ಹಲವು ಸಮಸ್ಯೆ ಯಿಂದ ಬಳಲುತ್ತಿರುವ ಸ್ಯಾಂಟ್ರೋ ರವಿ, ವಿಚಾರಣೆಗೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ನಾ ಎಂಬ ಅನುಮಾನ ಮೂಡಿದೆ.

ವಿಕ್ಟೋರಿಯಾ ಆಸ್ಪತ್ರೆ ಬಳಿ ಭದ್ರತೆ ಹೆಚ್ಚಿಸಿದ್ದಾರೆ. ಭದ್ರತೆಗೆ ಕೆಎಸ್ ಆರ್ ಪಿ ತುಕಡಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಸ್ಯಾಂಟ್ರೋ ರವಿಯನ್ನು ಜನವರಿ 30 ರವರೆಗೂ ಸಿಐಡಿ ಕಸ್ಟಡಿಗೆ ನ್ಯಾಯಾಲಯ ಅದೇಶ ಮಾಡಿತ್ತು.

error: Content is protected !!