ನಟ ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ ಇಂದು ಹೊಸ ಜೀವನಕ್ಕೆ ಕಾಲಿಟ್ಟರು. ಗೌಡರ ಸಂಪ್ರದಾಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದರು.
ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಅನೇಕ ಗಣ್ಯರು ಹಾಜರಿದ್ದರು. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ ನೇರವೇರಿದೆ.
ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವಾ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆದದ್ದು, ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು