ಸಪ್ತಪದಿ ತುಳಿದ ಅಭಿ- ಅವಿವಾ : ನವ ದಾಂಪತ್ಯಕ್ಕೆ ಹೆಜ್ಜೆ

Team Newsnap
1 Min Read

ನಟ ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿಡಪ್ಪ ಇಂದು ಹೊಸ ಜೀವನಕ್ಕೆ ಕಾಲಿಟ್ಟರು. ಗೌಡರ ಸಂಪ್ರದಾಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದರು.

WhatsApp Image 2023 06 05 at 2.27.35 PM

ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಅನೇಕ ಗಣ್ಯರು ಹಾಜರಿದ್ದರು. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ ನೇರವೇರಿದೆ.

ಅಭಿಷೇಕ್- ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವಾ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯರ ಮೇರೆಗೆ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆದದ್ದು, ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಇದರಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ- ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.

Share This Article
Leave a comment