ಸರಸ್ವತಿ ಮಹದೇಶ್ವರ ಬೆಟ್ಟ ಪ್ರಾಧಿಕಾರದ ನೂತನ ಕಾರ್ಯದರ್ಶಿ ನೇಮಕ

Team Newsnap
1 Min Read

ಚಾಮರಾಜನಗರ : ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸರಸ್ವತಿ ರವರನ್ನು ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ಮಲೈ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರಸ್ವತಿ ರವರು ಈ ಹಿಂದೆ ಚಾಮರಾಜನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಯಾಗಿ ಹಾಗೂ ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.ಬೆಂಗಳೂರಿನಲ್ಲಿ ಭಾರತದ ಮೊದಲ 3ಡಿ ಮುದ್ರಿಸಿದ ಅಂಚೆ ಕಚೇರಿ ಲೋಕಾರ್ಪಣೆ

ಇವರ ಉತ್ತಮ ಆಡಳಿತ ಮತ್ತು ಕಾರ್ಯವೈಖರಿಯನ್ನು ಮೆಚ್ಚಿ ಕರ್ನಾಟಕ ರಾಜ್ಯದಲ್ಲೇ ಅತಿಹೆಚ್ಚು ಆದಾಯ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿ ಇರುವ ಶ್ರೀ ಮಲೈ ಮಹದೇಶ್ವರ ಬೆಟ್ಟ ಪ್ರಾಧಿಕಾರಕ್ಕೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಆಯ್ಕೆಮಾಡಿ ಆದೇಶ ಹೊರಡಿಸಿದ್ದಾರೆ

Share This Article
Leave a comment