ವಿಜಯಪುರ : ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ನನ್ನು 20 ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್ನನ್ನು ಹೊರಗೆ ತೆಗಿದಿದ್ದಾರೆ.
ಯಶಸ್ವಿ ಕಾರ್ಯಾಚರಣೆಯಿಂದಾಗಿ ಮಗುವಿನ ಪೋಷಕರು, ಸಂಬಂಧಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸಂಭ್ರಮಿಸಿದರು.
ಸತತ 20 ಗಂಟೆಯಿಂದಲೂ ಕಾರ್ಯಾಚರಣೆ ಮಾಡಿ ಮಗುವನ್ನ ಹೊರ ತೆಗೆದಿರುವ ಸ್ವತಃ ಅಧಿಕಾರಿಗಳ ತಂಡ ಖುಷಿ ಕೂಡ ಹೇಳತೀರದಾಗಿದೆ. ಮಗುವನ್ನು ಕಾಪಾಡಿದ್ದು ನಮಗೆ ತುಂಬಾ ಆನಂದವನ್ನು ನೀಡುತ್ತಿದೆ ಎಂದು ಸಿಬ್ಬಂದಿಗಳು ಹೇಳಿದರು.ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ `ನಾಮಪತ್ರ’ ಸಲ್ಲಿಕೆ
ಭೂಮಿಯನ್ನು ಅಗೆಯುವ ವೇಳೆ ಕಲ್ಲು ಬಂಡೆ ಅಡ್ಡಿಯಾಗಿದ್ರಿಂದ ರಕ್ಷಣಾ ಕಾರ್ಯದಲ್ಲಿ ಕೊಂಚ ವಿಳಂಬವಾಗಿತ್ತು. ಅದು ಬಿಟ್ಟರೇ ಎಲ್ಲ ಕಾರ್ಯ ಚೆನ್ನಾಗಿ ನಡೆದಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ