ಮೈಸೂರು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಎಸ್​ಪಿಬಿಗೆ ನುಡಿ ನಮನ

Team Newsnap
1 Min Read

ಅ. 17ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಈ ಬಾರಿ ವರ್ಚುವಲ್ ದಸರಾ ಆಚರಿಸಲು ನಿರ್ಧರಿಸಲಾಗಿದೆ.
ಇದರ ನಡುವೆ 8 ದಿನಗಳ ಕಾಲ ಮೈಸೂರಿನ ಅರಮನೆ ಬಳಿ ನಡೆಯುವ ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಒಂದು ದಿನವನ್ನು ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೀಸಲಿಡಲು ನಿರ್ಧರಿಸಲಾಗಿದೆ.

ಅ. 21ರಂದು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಎಸ್​ಬಿ ಬಾಲಸುಬ್ರಹ್ಮಣ್ಯ ನುಡಿನಮನ ಇರಲಿದೆ.

ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ ನೆನಪಿಗಾಗಿ
ಮೈಸೂರು ಅರಮನೆ ಮುಂಭಾಗ‌ದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್​ಪಿಬಿ ನುಡಿ ನಮನ ಏರ್ಪಡಿಸಲಾಗಿದೆ. ಅ. 21ರಂದು ಗಾಯಕ ರಾಜೇಶ್ ಕೃಷ್ಣನ್ ತಂಡದವರು ಎಸ್​ಪಿ ಬಾಲಸುಬ್ರಹ್ಮಣ್ಯಂ ಹಾಡಿರುವ ಗೀತೆಗಳನ್ನು ಹಾಡುವ ಮೂಲಕ ನುಡಿನಮನ ಸಲ್ಲಿಸಲಿದ್ದಾರೆ.

ಮೈಸೂರು ದಸರಾದ ಇದೇ ವೇದಿಕೆಯಲ್ಲಿ ಈ ಹಿಂದೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ವರ್ಷದ ದಸರಾದಲ್ಲಿ ಎಸ್‌ಪಿ ಬಾಲಸುಬ್ರಹ್ಮಣ್ಯಂ ಗೌರವಾರ್ಥವಾಗಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿದೆ. 8 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಒಂದು ದಿನವನ್ನು ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೀಸಲಿಡಲಾಗುವುದು.

TAGGED: , ,
Share This Article
Leave a comment