ರಾಜ್ಯದ ಕೆಲವು ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ನಡೆಯಬೇಕಿರುವ ಚುನಾವಣೆಗೆ ಫೆ.25 ರಂದು ಮತದಾನ ನಡೆಸಲು ನಿರ್ಧರಿಸಿದೆ.
ಅವಧಿ ಮುಗಿದ ರಾಜ್ಯದ ಎಂಟು ಗ್ರಾಮ ಪಂಚಾಯತ್ ಗಳ 127 ಸ್ಥಾನಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ 103 ಗ್ರಾಮ ಪಂಚಾಯತ್ ಗಳ 135 ಸ್ಥಾನಗಳಿಗೆ ಫೆ.25ರಂದು ಉಪಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ನಿರ್ಧರಿಸಿದೆ.
ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳ 8 ಗ್ರಾ.ಪಂ.ಗಳ 127 ಸದಸ್ಯ ಸ್ಥಾನಗಳು ಮತ್ತು ವಿವಿಧ ಕಾರಣಗಳಿಂದ ತೆರವಾಗಿರುವ 30 ಜಿಲ್ಲೆಗಳ 103 ಗ್ರಾಮ ಪಂಚಾಯತ್ ಗಳ 135 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲಿದೆ.
- ನಾಮಪತ್ರ ಸಲ್ಲಿಸಲು ಫೆ.14 ಕೊನೆ ದಿನ
- ಫೆ.15ರಂದು ನಾಮಪತ್ರ ಪರಿಶೀಲನೆ
- ನಾಮಪತ್ರ ವಾಪಸ್ ಪಡೆದುಕೊಳ್ಳಲು ಫೆ.17 ಕೊನೆ ದಿನ
- ಫೆ. 25ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
- ಫೆ.28 ರಂದು ಫಲಿತಾಂಶ ಹೊರಬೀಳಲಿದೆ
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು