ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2020-2021) ವಿದ್ಯಾರ್ಥಿಗಳ ದಾಖಲಾತಿಗೆ ಅಕ್ಟೋಬರ್ 16ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಿಗೂ ಈ ಅವಕಾಶವನ್ನು ಕಲ್ಪಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕೊರೋನಾ ಸಂಕಷ್ಟದ ಕಾರಣವಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಹಾಗಾಗಿ ಸರ್ಕಾರಿ, ಅನುದಾನ ಮತ್ತು ಖಾಸಗೀ ಶಾಲೆಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳು ದಾಖಲಾತಿಯ ಅವಧಿಯನ್ನು ವಿಸ್ತರಿಸಬೇಕೆಂದು ಶಿಕ್ಷಣ ಇಲಾಖೆಯನ್ನು ವಿನಂತಿಸಿದ್ದವು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.
ಮೊದಲು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಸೆಪ್ಟೆಂಬರ್ 30ರ ವರೆಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು. ಶಿಕ್ಷಣ ಸಂಸ್ಥೆಗಳ ಕೋರಿಕೆಯ ಮೇರೆಗೆ ಶಿಕ್ಷಣ ಇಲಾಖೆ ಅಕ್ಟೋಬರ್ 16ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಿದೆ.
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ