ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿಯವರೆಗಿನ‌ ಶಾಲಾ ಆರಂಭ : ಸಿಎಂ ಬೊಮ್ಮಾಯಿ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನೋಡಿಕೊಂಡು 1ರಿಂದ 5ನೇ ತರಗತಿಯವರೆಗಿನ‌ ಶಾಲಾ ಆರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಬೆಂಗಳೂರಿನಲ್ಲಿ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೋನಾ ಪರಿಸ್ಥಿತಿ ಹೇಗೆ ಇರುತ್ತದೆ ಎಂದು ಈಗಲೇ ಹೇಳಲಾಗದು. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಶಾಲೆ ಗಳ ಆರಂಭದ ಬಗ್ಗೆ ನಿರ್ಧರಿಸಲಾಗು ವುದು ಎಂದರು.

ಸಭೆ-ಸಮಾರಂಭ, ರ‍್ಯಾಲಿಯಲ್ಲಿ ಜನ ಸೇರುವ ಸಂಬಂಧ ಸರ್ಕಾರ ಕೋವಿಡ್-೧೯ರನ್ವಯ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದರೂ ರಾಜಕೀಯ ಸಭೆ, ಸಮಾರಂಭ, ರ‍್ಯಾಲಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಬಗ್ಗೆ ಜನಸಾಮಾನ್ಯರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ
ರ್ಯಾಲಿ , ಸಭೆ ಸಮಾರಂಭಗಳಿಗೆ ಪ್ರತ್ಯೇಕ ಮಾರ್ಗ ಸೂಚಿ ಬರಲಿದೆ ಎಂದರು.

ರಾಜ್ಯದಲ್ಲಿ ಇತ್ತೀಚಿಗಿನ ಅತಿವೃಷ್ಟಿಯಿಂದ ಉಂಟಾದ ಹಾನಿ ಬಗ್ಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅವಶ್ಯಕ ನೆರವು ದೊರೆಯಲಿದೆ. ಕೇಂದ್ರ ತಂಡ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಿದ ನಂತರ ನಷ್ಟದ ಕುರಿತು ಅಂತಿಮ ಸಭೆ ನಡೆಸಲಾಗುವುದು ಎಂದು ವಿವರಿಸಿದರು.

Share This Article
Leave a comment