Main News

ಶಾಲೆ-ಕಾಲೇಜು ಪ್ರಾರಂಭಕ್ಕೆ ಕೇಂದ್ರ ಗ್ರೀನ್ ಸಿಗ್ನಲ್

ಶಾಲಾ-ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ತೋರಿ, ಮಾರ್ಗಸೂಚಿಯನ್ನು  ಬಿಡುಗಡೆ ಮಾಡಿದೆ.

ಅನ್​ಲಾಕ್​- 5.0 ಹಂತದಲ್ಲಿ ಶಾಲೆ- ಕಾಲೇಜು ಪ್ರಾರಂಭಕ್ಕೆ ಅವಕಾಶ ನೀಡಿರುವ ಕೇಂದ್ರ ಸರ್ಕಾರ, ಅದರ ನಿರ್ಧಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ.

ಅಕ್ಟೋಬರ್​ 15ರ ನಂತರ ಶಾಲೆ ಪ್ರಾರಂಭಿಸಬಹುದು.ಮಾರ್ಗಸೂಚಿ ಹೀಗಿದೆ.

ವಿದ್ಯಾರ್ಥಿಗಳು ಶಾಲೆಗೆ ಹೋಗುವ ಬಗ್ಗೆ ಸ್ವಯಂ ನಿರ್ಧಾರ ತೆಗೆದುಕೊಳ್ಳಬೇಕು. ಹಾಗೇ ಅವರ ಪಾಲಕರ ಲಿಖಿತ ಒಪ್ಪಿಗೆ ಇರಬೇಕು. ಅದರಲ್ಲೂ ಕಂಟೇನ್​ಮೆಂಟ್ ಝೋನ್​ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಾಲೆಗೆ ಹಾಜರಾಗಲು ಅವಕಾಶ ಇಲ್ಲ. ವಿದ್ಯಾರ್ಥಿಗಳು ಆನ್​ಲೈನ್​ ಕಲಿಕೆಯನ್ನೂ ಆರಿಸಿಕೊಳ್ಳಬಹುದು. ಇದನ್ನೂ ಹಾಜರಾತಿಗೆ ಮಾನ್ಯ ಮಾಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

  • ಶಾಲಾ-ಕಾಲೇಜುಗಳಲ್ಲಿ ಕಾರ್ಯಪಡೆಗಳು ರಚನೆಯಾಗಬೇಕು. ತುರ್ತು ಹಾರೈಕೆ ತಂಡ, ಪ್ರತಿಕ್ರಿಯೆ/ಸಹಾಯ ನೀಡುವ ಫೋರ್ಸ್​, ಸ್ವಚ್ಛತಾ ತಂಡಗಳನ್ನು ರಚಿಸಿ ಜವಾಬ್ದಾರಿ ನೀಡಬೇಕು.
  • ಮಕ್ಕಳು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆಗೆ ಸೂಕ್ತ ಯೋಜನೆ ರೂಪಿಸಿಕೊಂಡು, ಸಾಮಾಜಿಕ ನಿಯಮ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳಬೇಕು.
  • ಸಾಧ್ಯವಾದರೆ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಪ್ರತ್ಯೇಕವಾಗಿಸಿ. ಅದರಲ್ಲೂ ಪ್ರತ್ಯೇಕ ಸಮಯವನ್ನು ಅಳವಡಿಸಿ ಎಂದೂ ಮಾರ್ಗಸೂಚಿಯಲ್ಲಿ ಸಲಹೆ ನೀಡಲಾಗಿದೆ.
  • ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಿ, ಮಕ್ಕಳಿಗೆ ಬಡಿಸುವಾಗ ತೀವ್ರ ಮುನ್ನೆಚ್ಚರಿಕೆ ವಹಿಸಬೇಕು.
  • ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿಯ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್​ ಪಾಲನೆ ಮಾಡಬೇಕು.
  • ಶಾಲೆ ಶುರುವಾಗಿ 2-3 ವಾರದವರೆಗೂ ಯಾವುದೇ ಮೌಲ್ಯಮಾಪನ ಇರುವುದಿಲ್ಲ. ಐಸಿಟಿ (ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ) ಮತ್ತು ಆನ್​ಲೈನ್​ ಕಲಿಯನ್ನೇ ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024