February 21, 2026

Newsnap Kannada

The World at your finger tips!

Suresh Kumar

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭ ಮಾಡುವುದಿಲ್ಲ : ಸಚಿವ ಸುರೇಶ್ ಕುಮಾರ್

Spread the love

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೋನಾ ಮಹಾಮಾರಿ ಹರಡುತ್ತಿರುವ ನಡುವೆ ರಾಜ್ಯದಲ್ಲಿ ಶಾಲೆಗಳ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲು ಬುಧವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಮಹತ್ವದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್,
ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಾಗುವುದಿಲ್ಲ, ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ವಸತಿ ಶಾಲೆಗಳ ಆರಂಭ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎರಡು ದಿನಗಳಲ್ಲಿ ಸಿಎಂ ಗೆ ವರದಿ ನೀಡಲಾಗುವುದು. ಸಿಎಂ ನಿರ್ಧಾರದ ನಂತರ ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

error: Content is protected !!