Karnataka

ವಾರದೊಳಗೆ ಜೆಡಿಎಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: HDK

ಇನ್ನೊಂದು ವಾರದಲ್ಲಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಹೆಚ್ ​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ಪಂಚರತ್ನ ಯೋಜನೆ ಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 76 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಈಗ ಜೆಡಿಎಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ ಎಂದರು.ಸುಮಲತಾ ರಾಜ್ಯ ರಾಜಕೀಯ ಪ್ರವೇಶಕ್ಕೆ ಬೆಂಬಲಿಗರ ಗ್ರೀನ್ ಸಿಗ್ನಲ್

ಹಾಸನದ ಟಿಕೆಟ್​ ಗೊಂದಲದ ವಿಷಯದ ಬಗ್ಗೆ ಮಾತನಾಡಿ, ಯಾವುದೇ ಕೋಲ್ಡ್​ ವಾರ್​, ಹಾಟ್​ ವಾರ್​ಗಳು ನಡೆಯುತ್ತಿಲ್ಲ. ಹಾಸನದ ಏಳು ಕ್ಷೇತ್ರಗಳಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಸುಗಮವಾಗಿ, ಫೆ.3 ರಂದು ಎಲ್ಲವೂ ಕ್ಲಿಯರ್​ ಆಗುತ್ತದೆ ಎಂದರು. ಬಳ್ಳಾರಿಯಲ್ಲಿ ಅಷ್ಟೇ ಅಲ್ಲ, ರಾಜ್ಯದ ಇತರೆ ಜಿಲ್ಲೆಗಳಲ್ಲೂ ನಮ್ಮ ಪಕ್ಷದ ನಾಯಕರನ್ನು ಬಿಜೆಪಿ ಮತ್ತು ಕಾಂಗ್ರೆಸ್​ನವರು ಹೈಜಾಕ್ ಮಾಡುತ್ತಾರೆ ಎಂದು ಆರೋಪಿಸಿದರು. ಅಲ್ಲದೆ, ಗಣಿಗಾರಿಕೆ ಹಗರಣ ಹೊರ ಬರಲು ಕುಮಾರಸ್ವಾಮಿಯೇ ಕಾರಣ. ಲೋಕಾಯುಕ್ತರಿಗೆ ದಾಖಲೆಗಳನ್ನು ನೀಡಿ ತನಿಖೆಗೆ ಅದೇಶ ಮಾಡಿದ್ದೆ ಎಂದು ಹೆಚ್​ಡಿಕೆ ಹೇಳಿದರು.

ನನ್ನ ವಿರುದ್ಧ 150 ಕೋಟಿ ಲಂಚದ ಆರೋಪದ ಸಿಡಿ ಗತಿ ಏನಾಯ್ತು ಎಂಬ ಬಗ್ಗೆ ಯಾರಿಗೂ ತಿಳಿಯುತ್ತಿಲ್ಲ. ರಾಜ್ಯದ ಉಪಮುಖ್ಯಮಂತ್ರಿಯಾಗಿ ನಂತರ ಮುಖ್ಯಮಂತ್ರಿಯಾಗಿ, 13 ಬಜೆಟ್ ನೀಡಿದವರು ಕ್ಷೇತ್ರ ಸಿಗದೆ ಒದ್ದಾಡುತ್ತಿದ್ದಾರೆ. ಎಲ್ಲ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಇದೆ. ಪ್ರತಿ ಪಕ್ಷಗಳಲ್ಲಿ ಅವರ ಪಕ್ಷಗಳ ಬೆಳವಣಿಗೆಗಿಂತ ಹೆಚ್ಚಾಗಿ ಅವರವರ ಕುಟುಂಬ ಹಾಗೂ ಮಕ್ಕಳ ಬೆಳವಣಿಗೆ ಬಗ್ಗೆ ಚಿಂತೆ ಮಾಡುತ್ತಿದ್ದಾರೆ ಎಂಬುದು ನನ್ನ ಅಭಿಪ್ರಾಯ ಎಂದರು.

ನಂಗೆ ಆರುವರೆ ಕೋಟಿ ಜನರ ಚಿಂತೆ :

ಸಿದ್ದರಾಮಯ್ಯ ಅವರು ಏಕೆ ವರುಣದಲ್ಲಿ ನಿಲ್ಲಲು ತಯಾರಾಗಿಲ್ಲ? ಯಾಕೆ ಬೇರೆ ಕ್ಷೇತ್ರ ಹುಡುಕುತ್ತಿದ್ದಾರೆ? ವರುಣದಲ್ಲಿ ಅವರ ಮಗನ ಭವಿಷ್ಯ ನಿರ್ಮಾಣ ಮಾಡಲು ಹೊರಟಿದ್ದಾರೆ. ಈ ಚುನಾವಣೆಯಲ್ಲಿ ಅವರ ಮಗನ ಅಸ್ತಿತ್ವವನ್ನು ಮುಂದಿನ ರಾಜಕಾರಣಕ್ಕೆ ಯಾವ ರೀತಿ ತಯಾರಿ ಮಾಡಬೇಕು ಎಂಬುದರಲ್ಲಿ ಬ್ಯುಸಿ ಆಗಿದ್ದಾರೆ. ಅದಕ್ಕೆ ಮಗನನ್ನು ವರುಣದಲ್ಲಿ ನಿಲ್ಲಿಸಲೇಬೇಕಾದಂತಹ ಪರಿಸ್ಥಿತಿಯಲ್ಲಿ ಅವರಿಗಿದೆ. ಹೀಗೆ ಕ್ಷೇತ್ರಕ್ಕೆ ಹುಡುಕಾಟ ಮಾಡುವವರಿಗೆ, ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದರು.

ಖರ್ಗೆ ಅವರಿಗಿನ್ನು ಮುಖ್ಯಮಂತ್ರಿಯಾಗಿ ಬರಲು ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷರನ್ನಾಗಿ ಮಾಡಿಕೊಂಡಿದ್ದಾರೆ. ಆದರೆ ಅವರ ಪರಿಸ್ಥಿತಿ ಅಲ್ಲಿ ಏನಿದೆ ಎಂಬುದು ನನಗೆ ಗೊತ್ತಿದೆ. ಅವರಿಗೀಗ, ನನ್ನದಂತು ಮುಗೀತು, ಕೊನೇಪಕ್ಷ ತಮ್ಮ ಮಗನಿಗಾದರೂ ಮುಂದಿನ ಸರ್ಕಾರದಲ್ಲಿ ಒಂದು ಶಕ್ತಿ ತುಂಬುವಂತಹ ವಾತಾವರಣ ನಿರ್ಮಾಣ ಮಾಡಿಕೊಳ್ಳುವ ಎನ್ನವ ಚಿಂತೆ. ಅದೇ ರೀತಿಯಲ್ಲಿ ಯಡಿಯೂರಪ್ಪ ಅವರಿಗೆ ಅವರ ಮಗನನ್ನು ಮುಂದೆ ರಾಜ್ಯದ ನಾಯಕನನ್ನಾಗಿ ಮಾಡುವುದು ಹೇಗೆ ಎನ್ನುವ ಚಿಂತೆ. ಈಶ್ವರಪ್ಪ ಅವರಿಗೆ ಅವರ ಮಗನ ಚಿಂತೆ. ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರಿಗೆ ಮಕ್ಕಳ ಚಿಂತೆ, ಆದರೆ ನನ್ನ ಚಿಂತೆ ಆರು ಕೋಟಿ ಜನರ ಭವಿಷ್ಯದ ಬಗ್ಗೆ ಎಂದು ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೂ ಜೆಡಿಎಸ್​ ಹಾಗೂ ಹೆಚ್​ ಡಿ ಕೆ ಕುಮಾರಸ್ವಾಮಿ ಅವರ ಕುಟುಂಬವನ್ನು ಟಾರ್ಗೆಟ್​ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ, ನನ್ನನ್ನು ಟಾರ್ಗೆಟ್​ ಮಾಡುತ್ತಿರುವುದು ಇವತ್ತಿನ ವಿಷಯವಲ್ಲ. ಮೂವತ್ತು ವರ್ಷಗಳಿಂದ ನಡೆಯುತ್ತಿದೆ ಇದು. ನಾನು ರಾಜಕೀಯಕ್ಕೆ ಬರುವ ಮೊದಲೇ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ನಮ್ಮ ಪಕ್ಷಕ್ಕೆ ಈಗಾಗಲೇ ಆ ಲೇಬಲ್​ ಕೊಟ್ಟಾಗಿದೆ. ಅದರ ಬಗ್ಗೆ ಈಗ ಮಾತನಾಡುವುದಿಲ್ಲ ಎಂದು ಹೇಳಿದರು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024