ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ , ಗದಗ ಕೊನೆ

Team Newsnap
1 Min Read

ಬೆಂಗಳೂರು : 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ, karresults.nic.in ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು.

ರಾಜ್ಯದಾದ್ಯಂತ ಈ ಬಾರಿ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದೆ.6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು

ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆ ನಡೆದಿದ್ದು, ಈ ಬಾರಿ 81.15 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ವಾಣಿಜ್ಯ ವಿದ್ಯಾರ್ಥಿಗಳು 1.74,315, ಕಲಾವಿಭಾಗದಲ್ಲಿ 1,28, 448, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ.

ವಿದ್ಯಾಲಕ್ಷ್ಮಿ ಪ್ರಥಮ ಸ್ಥಾನ ಪಡೆದಿದ್ದು, 600 ಕ್ಕೆ 598 ಅಂಕ ಪಡೆದಿದ್ದಾರೆ.

ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದರೆ, ಉಡುಪಿ ಎರಡನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ, ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರಕಿದೆ .ತಾಯಿಯಿಂದ ಇಬ್ಬರು ಮಕ್ಕಳ ಬರ್ಬರ ಹತ್ಯೆ

ಮೊಬೈಲ್ ನಲ್ಲಿ ಫಲಿತಾಂಶ ನೋಡುವ ಕ್ರಮ :

  • karresults.nic.in ಪಿಯುಸಿಯ ಸಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)
  • ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
  • ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Share This Article
Leave a comment