ಆಗಸ್ಟ್-ಸೆಪ್ಟೆಂಬರ್ ನಲ್ಲಿ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತ ಮತ್ತು ದೋಷರಹಿತವಾಗಿ ನಡೆಸಲು ಡಿಸಿಗಳಿಗೆ ಅಗತ್ಯ ಸಲಹೆ , ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ ದ್ವಿತೀಯ ಪಿಯುಸಿ ಪರೀಕ್ಷೆ ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರೆಗೆ ನಡೆಯಲಿದೆ. ಈ ಸಂಬಂಧ ಇಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ಮಾಡಿರುವುದಾಗಿ ಹೇಳಿದರು.
ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ರಾಜ್ಯದಲ್ಲಿ ಒಟ್ಟು 5,546 ಕಾಲೇಜುಗಳಿಂದ 18,414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಗಳಲ್ಲಿ ಆಗಸ್ಟ್ 17ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದರು.
ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ