ರಾಮನಗರಕ್ಕೆ ಮಾತ್ರ 144 ಸೆಕ್ಷನ್ ಹಾಕಿದ್ದಾರೆ ಇದರ ಅರ್ಥ ಏನು?
ಎಂದು ಪ್ರಶ್ನೆ ಮಾಡಿರುವ
ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ಅರೆ
ಕೋವಿಡ್ ನಿಯಮವನ್ನು ಪಾಲಿಸಿಕೊಂಡೇ ನಾವು ಪಾದಯಾತ್ರೆ ಮಾಡುತ್ತೇವೆ. ಯಾಕೆ ರಾಮನಗರಕ್ಕೆ ಮಾತ್ರ ನಿಷೇದಾಜ್ಞೆ ಹಾಕಿದ್ದಾರೆ? ಇದರ ಅರ್ಥ ಏನು? ಎಂದು ಪ್ರಶ್ನೆ ಮಾಡಿದ್ದಾರೆ.
ಬೊಮ್ಮಾಯಿ ನೀರಾವರಿ ಸಚಿವರಾಗಿದ್ದರು. ಅವರು ಏನು ಮಾಡಿದರು? ಅನಗತ್ಯವಾಗಿ ಗೊಂದಲ ಸೃಷ್ಟಿಸಲು ಸರ್ಕಾರ 144 ಸೆಕ್ಷನ್ ಹಾಕಿದೆ. ನಾವು 15 ಜನ ಪಾದಯಾತ್ರೆ ಮಾಡಿದ್ರೆ ಬಿಡ್ತೇವೆ ಅಂತ ಕಾರಜೋಳ ಹೇಳ್ತಾರೆ. 15 ಜನ ಒಟ್ಟಿಗೆ ನಡೆದರೆ ಅದು 144 ಕಲಂ ಉಲ್ಲಂಘನೆ ಆಗೋದಿಲ್ಲವಾ? ನಾವು ನಿಯಮದ ಪ್ರಕಾರ ಪಾದಯಾತ್ರೆ ಮಾಡ್ತೇವೆ. ಎಲ್ಲೂ ಇಲ್ಲದ 144 ಕಲಂ ರಾಮನಗರಕ್ಕೆ ಮಾತ್ರ ಯಾಕೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕುವ ಹುನ್ನಾರ. ಎರಡೂವರೆ ವರ್ಷದಿಂದ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಸುಳ್ಳು ಜಾಹೀರಾತು ನೀಡಿ ಹಾದಿ ತಪ್ಪಿಸುವ ಹುನ್ನಾರ ನಡೆಸಿದೆ. ನಾವು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ. ನಿಷೇದಾಜ್ಞೆ ಹಾಕಿದ್ರೆ ಐದೈದು ಜನ ಹೋಗಿ ಮಾಡ್ತೇವೆ ಎಂದರು.
ಬಿಜೆಪಿಯಿಂದ
ವಿಳಂಬದ್ರೋಹ ಆಗಿದೆ. ಯಾವುದೇ ಅಡೆತಡೆ ಇಲ್ಲದಿದ್ದರೂ ಯಾಕೆ ಕೆಲಸ ಮಾಡಿಲ್ಲ. ಕೇಂದ್ರಕ್ಕೆ ಒತ್ತಾಯ ಮಾಡೇ ಇಲ್ಲ. ಯಾಕೆ ರಾಜಕೀಯ ಬಣ್ಣ ನೀಡುವ ಪ್ರಯತ್ನ ಮಾಡುತ್ತಿದೆ. ಬಿಜೆಪಿ ಸರ್ಕಾರ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಿಡಿಕಾರಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ